ಇಡುಕ್ಕಿ, ಆ (DaijiworldNews/HR): ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ರಾಜನಲಾದ ಪೆಟ್ಟಿಮುಡಿಯಲ್ಲಿ ನಡೆದ ಭೀಕರ ಭೂಕುಸಿತದಲ್ಲಿ ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಆಗಸ್ಟ್ 6ರಂದು ಭೂ ಕುಸಿತ ಸಂಭವಿಸಿದ್ದು ಈ ಸ್ಥಳದಲ್ಲಿ 78 ಜನರು ತಂಗಿದ್ದರು, ಅದರಲ್ಲಿ 12 ಮಂದಿಯನ್ನು ರಕ್ಷಿಸಲಾಗಿದ್ದು, 58 ಶವಗಳು ಪತ್ತೆಯಾಗಿವೆ.
ಮೃತರ ಕುಟುಂಬಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 5 ಲಕ್ಷ ಹಾಗೂ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.
ಶನಿವಾರದವರೆಗೆ 56 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಇದೀಗ ಮತ್ತೆ ಎರಡು ಮೃತದೇಹಗಳು ಸಿಕ್ಕಿ ಸಾವಿನ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ಸದ್ಯ ಉಳಿದವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.