ಬೆಂಗಳೂರು, ಆ. 16 (DaijiworldNews/MB) : ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ನವೀನ್ ತಲೆಗೆ 51 ಲಕ್ಷ ರೂ. ಬಹುಮಾನವನ್ನು ಘೋಷಿಸುವ ಮೂಲಕ ಮತ್ತಷ್ಟು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಮುಖಂಡನನ್ನು ಮೀರತ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಕಾರಣ ಇದೇ ವಿಚಾರದಲ್ಲಿ ಬೆಂಗಳೂರಿನ ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿಯಲ್ಲಿ ಹಿಂಸಾಚಾರ ನಡೆದಿದ್ದು ಈ ಸಂದರ್ಭದಲ್ಲಿ ಗೋಲಿಬಾರ್ ನಡೆದು ಕನಿಷ್ಟ ಮೂರು ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಪೊಲೀಸರು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಮುನ್ನೂರಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದ್ದು ಈ ನಡುವೆ ಮೀರತ್ನಲ್ಲಿ ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಮುಖಂಡ ಶಹಜೇಬ್ ರಿಜ್ವಿ ವಿಡಿಯೋವೊಂದನ್ನು ಮಾಡಿ ಅದರಲ್ಲಿ, ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿ ಶಿರಚ್ಛೇದನ ಮಾಡಿದವರಿಗೆ 51 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ.
ಎರಡು ದಿನಗಳ ಹಿಂದೆ ಶಹಜೇಬ್ ರಿಜ್ವಿ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದ್ದು ಇದೀಗ
"ಕಾಂಗ್ರೆಸ್ ಶಾಸಕರ ಸೋದರಳಿಯ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್ನಿಂದಾಗಿ ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟಾಗಿದೆ. ಹಾಗಾಗಿ ಯಾರು ಅವರ ಸೋದರಳಿಯನ ಶಿರಚ್ಛೇದನ ಮಾಡುತ್ತೀರೋ ಅವರಿಗೆ 51 ಲಕ್ಷ ರೂ. ನೀಡುತ್ತೇನೆ. ನನ್ನ ಈ ನಿರ್ಧಾರಕ್ಕೆ ಬೆಂಬಲ ನೀಡುವವರಿಂದ ಈ ಹಣವನ್ನು ಸಂಗ್ರಹ ಮಾಡಲಾಗುವುದು" ಎಂದು ರಿಜ್ವಿ ಹೇಳಿದರು.
ಇದೀಗ "ರಿಜ್ವಿ ವಿರುದ್ಧ ಪ್ರಕರಣ ದಾಖಲಿಸಿದ ನಂತರ ನಾವು ತನಿಖೆಗೆ ಆದೇಶಿಸಿದ್ದೇವೆ. ಅವರನ್ನು ಬಂಧಿಸಲಾಗಿದೆ" ಎಂದು ಮೀರತ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಅಜಯ್ ಸಾಹ್ನಿ ತಿಳಿಸಿದ್ದಾರೆ.