ನವದೆಹಲಿ, ಆ 16 (DaijiworldNews/PY): ಎಂ.ಎಸ್. ಧೋನಿ ಕ್ರಿಕೆಟ್ನಿಂದ ನಿವೃತ್ತರಾಗುತ್ತಿದ್ದಾರೆ ಆದರೆ ಬೇರೆ ಯಾವುದರಿಂದಲೂ ಅಲ್ಲ. ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಂ.ಎಸ್. ಧೋನಿ ಕ್ರಿಕೆಟ್ನಿಂದ ನಿವೃತ್ತರಾಗುತ್ತಿದ್ದಾರೆ ಆದರೆ ಬೇರೆ ಯಾವುದರಿಂದಲೂ ಅಲ್ಲ. ಅವರ ಪ್ರತಿಭೆ ಹಾಗೂ ಸಮಸ್ಯೆಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ ಮತ್ತು ಅವರು ಕ್ರಿಕೆಟ್ನಲ್ಲಿ ಪ್ರದರ್ಶಿಸಿದ ಸ್ಪೂರ್ತಿದಾಯಕ ನಾಯಕತ್ವ ಸಾರ್ವಜನಿಕ ಜೀವನದಲ್ಲಿ ಅಗತ್ಯವಿದೆ. ಅವರು 2024 ರಲ್ಲಿ ಎಲ್ಎಸ್ ಸಾರ್ವತ್ರಿಕ ಚುನಾವಣೆಯಲ್ಲಿ ಹೋರಾಡಬೇಕು ಎಂದಿದ್ದಾರೆ.
ಈ ಬಗ್ಗೆ ಎಂ.ಎಸ್.ಧೋನಿ ಅವರು ತಮ್ಮ ಇನ್ಸ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದು, ನನ್ನ ವೃತ್ತಿ ಜೀವನದಲ್ಲಿ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 7.29 ಗಂಟೆಯ ನಂತರ ನನ್ನನ್ನು ನಿವೃತ್ತನೆಂದು ಪರಿಗಣಿಸಿ ಎಂದು ತಿಳಿಸಿದ್ದರು.