ನವದೆಹಲಿ, ಆ. 16 (DaijiworldNews/MB) : ಭಾರತದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಫೇಸ್ಬುಕ್ ಮತ್ತು ವಾಟ್ಸಾಪ್ ಅನ್ನು ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಆರೋಪ ಮಾಡಿದ್ದು ಅಮೇರಿಕದ ಪತ್ರಿಕೆಯೊಂದು ಪ್ರಕಟಿಸಿರುವ ಲೇಖನವನ್ನು ಆಧರಿಸಿ ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಭಾನುವಾರ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್, ಫೇಸ್ಬುಕ್ ಭಾರತದ ಹಿರಿಯ ಅಧಿಕಾರಿಯೊಬ್ಬರು ದ್ವೇಷ ಭಾಷಣ ನಿಯಮಗಳನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜಕಾರಣಿ ಮತ್ತು ಇತರ ಹಿಂದೂ ರಾಷ್ಟ್ರೀಯವಾದಿ ವ್ಯಕ್ತಿಗಳು ಮತ್ತು ಗುಂಪುಗಳಿಗೆ ಅನ್ವಯಿಸುವುದನ್ನು ವಿರೋಧ ಮಾಡಿದ್ದರು. ಬಿಜೆಪಿ ನಾಯಕರ ದ್ವೇಷ ಭಾಷಣಗಳನ್ನು ಫೇಸ್ಬುಕ್ ನಿರ್ಲಕ್ಷಿಸುತ್ತಿದೆ. ಮೋದಿ ಅವರ ಪಕ್ಷಕ್ಕೆ ಸಂಬಂಧಿಸಿದ ನಾಯಕರ ದ್ವೇಷ ಭಾಷಣಗಳ ಮೇಲೆ ಕ್ರಮ ಕೈಗೊಳ್ಳದಂತೆ ಕಂಪನಿಯ ಉದ್ಯೋಗಿಗಳಿಗೆ ತಿಳಿಸಿದ್ದರು. ಹಾಗಾದ್ದಲ್ಲಿ ಭಾರತದಲ್ಲಿ ಕಂಪನಿಯ ವ್ಯವಹಾರಕ್ಕೆ ಸಮಸ್ಯೆ ಉಂಟಾಗುತ್ತದೆ ಎಂಬ ವರದಿಯನ್ನು ಮಾಡಿತ್ತು.
ಈ ವರದಿಯನ್ನು ಉಲ್ಲೇಖ ಮಾಡಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ''ಭಾರತದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಫೇಸ್ಬುಕ್ ಮತ್ತು ವಾಟ್ಸಾಪ್ ಅನ್ನು ನಿಯಂತ್ರಿಸುತ್ತಿದೆ. ಅವರು ಅದರ ಮೂಲಕ ನಕಲಿ ಸುದ್ದಿ ಮತ್ತು ದ್ವೇಷವನ್ನು ಹರಡುತ್ತಾರೆ. ಇದರ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಯತ್ನ ಮಾಡುತ್ತಾರೆ. ಅಂತಿಮವಾಗಿ, ಅಮೇರಿಕನ್ ಮಾಧ್ಯಮವು ಫೇಸ್ಬುಕ್ ಬಗ್ಗೆಗಿನ ಸತ್ಯವನ್ನು ಹೊರತಂದಿದೆ'' ಎಂದು ಹೇಳಿದ್ದಾರೆ.
ಇನ್ನು ರಾಹುಲ್ ಗಾಂಧಿ ಟ್ವೀಟ್ಗೆ ಕಾಮೆಂಟ್ ಮಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ''ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಮಾಧ್ಯಮದ ಈ ವರದಿ ಮತ್ತು ಭಾರತದಲ್ಲಿ ದ್ವೇಷ-ಭಾಷಣಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ನ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯೆ ಖಂಡಿತವಾಗಿಯೂ ಕೇಳಲು ಬಯಸುತ್ತದೆ'' ಎಂದು ಹೇಳಿದ್ದಾರೆ.
ಬಿಜೆಪಿ ನಿಯಂತ್ರಣದಲ್ಲಿ