ನವದೆಹಲಿ, ಆ 17 (DaijiworldNews/PY): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂಬುದಾಗಿ ದೆಹಲಿಯ ಸೇನಾ ಸಂಶೋಧನಾ ಹಾಗೂ ರೆಫರಲ್ ಆಸ್ಪತ್ರೆ ಸೋಮವಾರ ಬೆಳಗ್ಗೆ ತಿಳಿಸಿದೆ.
ಆಸ್ಪತ್ರೆಯ ಮಾಹಿತಿಯ ಪ್ರಕಾರ, ಪ್ರಣಬ್ ಮುಖರ್ಜಿ ಅವರು ವೆಂಟಿಲೇಟರ್ನ ನೆರವು ಪಡೆಯುತ್ತಿದ್ದು, ಅವರ ಆರೋಗ್ಯದ ಬಗ್ಗೆ ಸೂಕ್ಷ್ಮವಾದ ನಿಗಾವಹಿಸಲಾಗಿದೆ. ಆವರ ಆರೋಗ್ಯದ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಹೇಳಿದೆ.
ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಂದೆ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡುಬಂದಿದೆ. ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವರ ದಯೆ ಮತ್ತು ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರದಲ್ಲೇ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಭಾನುವಾರ ಟ್ವೀಟ್ ಮಾಡಿದ್ದರು.
ಆಗಸ್ಟ್ 10ರಂದು ತೀವ್ರ ಅನಾರೋಗ್ಯದಿಂದ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮೆದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಬ್ರೇನ್ ಸರ್ಜರಿ ಮಾಡಲಾಗಿತ್ತು.