ಬೆಂಗಳೂರು, ಆ.17 (DaijiworldNews/HR): ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಕಾರಣನಾದ ಆರೋಪಿ ನವೀನ್ ಅನ್ನು ಬಂಧಿಸಿದ್ದ ಪೊಲೀಸರು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದು, ಆರೋಪಿಗೆ ಬೆಂಗಳೂರಿನ 11ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಗಲಭೆಗೆ ಕಾರಣವಾಗಿದ್ದು, ಆರೋಪಿ ನವೀನ್ ಎಂಬಾತ ಫೇಸ್ ಬುಕ್ ನಲ್ಲಿ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಎಂಬುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ, ಸ್ಥಳ ಮಹಜರು ನಡೆಸಿ, ಇಂದು ಪೊಲೀಸರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.
11ನೇ ಎಸಿಎಂಎಂನ ನ್ಯಾಯಾಧೀಶರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ, ಅವಹೇಳನಕಾರಿ ಪೋಸ್ಟ್ ಆಗಿದ್ದ ಆರೋಪಿ ನವೀನ್ ಗೆ 14 ದಿನಗಳ ನ್ಯಾಯಂಗ ಬಂದನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಆರೋಪಿ ನವೀನ್ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗಗನಾಗಿದ್ದು, ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಿದ ಬೇಳೆ ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಕೂಡ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದ.
ಇದೀಗ ಆರೋಪಿ ನವೀನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ.