ಬೆಂಗಳೂರು, ಆ 18 (DaijiworldNews/PY): ಕನಿಷ್ಠ ಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ದಲಿತ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ’ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾʼ ... ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯದ ಹೊರ ಬರುತ್ತಿದೆ. ಕಾಂಗ್ರೆಸ್ ಕಾಪೊರೇಟರ್ಗಳಾದ ಸಂಪತ್ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದಿದ್ದಾರೆ.
ಕನಿಷ್ಠ ಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ದಲಿತ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ ಎಂದು ಹೇಳಿದ್ದಾರೆ.