ನವದೆಹಲಿ, ಆ 19 (DaijiworldNews/HR): ಕೊರೊನಾ ವೈರಸ್ ಹಿನ್ನಲೆಯಲ್ಲಿ ವಿದೇಶದಲಿದ್ದ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಸರ್ಕಾರವು ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಆರಂಭಿಸಿದ್ದು, ಇದುವರೆಗೂ ಸುಮಾರು 11 ಲಕ್ಷ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ.
ಇಟಲಿ, ಆಸ್ಟ್ರೇಲಿಯಾ, ಜಪಾನ್ ಸೇರಿ 13 ರಾಷ್ಟ್ರಗಳಲ್ಲಿದ್ದ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ಕರೆ ತರಲಾಗಿದೆ.
ಇನ್ನು ಮೇ ತಿಂಗಳ ಅಂಕಿ-ಅಂಶಗಳ ಪ್ರಕಾರ ವಿದೇಶಗಳಲ್ಲಿದ್ದ 10,98,000 ಭಾರತೀಯರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ಸುರಕ್ಷಿತವಾಗಿ ಭಾರತಕ್ಕೆ ಕರೆ ತರಲಾಗಿದೆ ಎಂದು ಭಾರತೀಯ ವಿಮಾನಯಾನ ಸಚಿವಾಲಯವು ಟ್ವೀಟ್ ಮಾಡಿದೆ.
ವಂದೇ ಭಾರತ್ ಮಿಷನ್ ವ್ಯಾಪ್ತಿಯನ್ನು ಮತ್ತಷ್ಟು ಬಲಪಡಿಸಲಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಯುಎಇ, ಕತಾರ್ ಮತ್ತು ಮಾಲ್ಡೀವ್ಸ್ ಜೊತೆಗೆ ವಿಮಾನ ಪ್ರಯಾಣದ ವ್ಯವಸ್ಥೆ ಜಾರಿಯಲ್ಲಿದೆ. ನಾವು ಈಗ ಈ ಪ್ರಯತ್ನಗಳನ್ನು ಮುಂದಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಮತ್ತು ಅಂತಹ ವ್ಯವಸ್ಥೆಗಳನ್ನು ಸ್ಥಾಪಿಸಲು ಇನ್ನೂ 13 ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಸಹಕಾರಿ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.