ಬೆಂಗಳೂರು, ಆ. 19 (DaijiworldNews/MB) : ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ನಡೆದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿ ಹಾನಿಗೆ ಸಂಬಂಧಿಸಿ ಆಗಿರುವ ಹಾನಿಯನ್ನು ನಿರ್ಣಯಿಸಲು ಆಯುಕ್ತರನ್ನು ನೇಮಕ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಆ.20 ರಂದು ನಡೆಯಲಿದೆ.
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂ. ಖಾಸಗಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದ್ದು, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಗಲಭೆಕೋರ ಆರೋಪಿಗಳಿಂದಲೇ ನಷ್ಟದ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೋಮವಾರ ತಿಳಿಸಿದ್ದರು. ಹಾಗೆಯೇ ಹಾಗೆಯೇ ರಾಜ್ಯ ಸರ್ಕಾರಕ್ಕೆ ಗಲಭೆಯಿಂದ ಉಂಟಾಗಿರುವ ನಷ್ಟದ ಮೊತ್ತ ನಿರ್ಣಯಿಸಲು ಆಯುಕ್ತರನ್ನು ನೇಮಕ ಮಾಡುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಿದೆ.
ಸರ್ಕಾರ ಸಲ್ಲಿಸಿರುವ ಈ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಗುರುವಾರ ನಡೆಸಲಿದ್ದಾರೆ.