ಬೆಂಗಳೂರು, ಆ. 20(DaijiworldNews/HR): ಕೆಜಿ ಹಳ್ಳಿ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಎಸ್ಡಿಪಿಐ ನಿಷೇಧದ ವಿಚಾರವನ್ನು ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಯಾವುದೇ ಸಂಘಟನೆಯನ್ನು ಒಂದು ಘಟನೆಗೆ ಆಧಾರಿತವಾಗಿ ನಿಷೇಧಿಸಲು ಸಾಧ್ಯವುಲ್ಲ ಹಾಗಾಗಿ ಈ ಹಿಂದೆ ನಡೆದಿರುವ ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರಗಳನ್ನು ಕಲೆ ಹಾಕುವ ಕೆಲಸ ನಡೆಯಿತ್ತಿದ್ದು, ನಾವು ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ ಎಂದರು.
ಇನ್ನು ಕಾಂಗ್ರೆಸ್ ನಾಯಕರು ಮತ ಬ್ಯಾಂಕ್ ರಾಜಕೀಯವನ್ನು ಇನ್ನಾದರೂ ಬೀಡಬೇಕು. ಗಲಭೆಗೆ ಸಂಬಂಧಿಸಿದಂತೆ ಯಾವುದೇ ಸಂಘಟನೆ ತಪ್ಪು ಮಾಡಿದರೂ ಅವರನ್ನು ಬಿಡುವುದಿಲ್ಲ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿ ಸರ್ಕಾರದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ ಆದ್ದರಿಂದ ಗಲಭೆಯಲ್ಲಿ ಆಸ್ತಿ ನಷ್ಟ ಉಂಟುಮಾಡಿದವರಿಂದಲೇ ನಷ್ಟ ಭರಿಸಲಾಗುತ್ತದೆ ಎಂದು ಹೇಳಿದರು.
ಇದೇ ಸಮಯದಲ್ಲಿ ತಮ್ಮ ದೆಹಲಿ ಭೇಟಿಯ ಕುರಿತು ಮಾತನಾಡಿದ ಅವರು, ದೆಹಲಿ ಭೇಟಿ ಯಶಸ್ವಿಯಾಗಿದೆ. ನಾನು ಅಂದುಕೊಂಡಂತಹ ಎಲ್ಲಾ ಕೆಲಸ ಪೂರ್ಣಗೊಂಡಿದೆ. ನನಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸದಾನಂದ ಗೌಡರು ಸಹಕಾರ ನೀಡಿದ್ದು, ನನ್ನ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸ ಯಶಸ್ವಿಯಾಗಿದ್ದು, ಮೈಸೂರಿನಲ್ಲಿ ಸ್ವಾಯತ್ತ ಕೇಂದ್ರ ಮಾಡಲು ಎಚ್ಆರ್ ಡಿ ಮಿನಿಸ್ಟರ್ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.