ಬೆಂಗಳೂರು, ಆ 20 (Daijiworld News/MSP): ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಂಗಾರು ಅಧಿವೇಶನದ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ಈ ಬಾರಿಯ ವಿಧಾನ ಮಂಡಲ ಮುಂಗಾರು ಅಧಿವೇಶನ ಸಪ್ಟೆಂಬರ್ 21ರಿಂದ 30ರವರೆಗೆ ನಡೆಯಲಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ವಿಧಾನಸಭಾ ಸ್ಪೀಕರ್ ಹಾಗೂ ವಿಧಾನಪರಿಷತ್ ಸಭಾಪತಿ ಅವರಿಗೆ ಸಂಪುಟ ಮನವಿ ಮಾಡಿದೆ.
ಕೋವಿಡ್ ಕಾರಣದಿಂದ ಬೇಸಿಗೆ ಅಧಿವೇಶನವನ್ನು ಸರ್ಕಾರ ಮುಂದೂಡಿತ್ತು. ಈ ಸಮಯದಲ್ಲಿ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ಸರ್ಕಾರ ಅಂಗೀಕಾರ ಪಡೆದಿತ್ತು. ಇದು ವಿಪಕ್ಷಗಳ ವಿರೋಧಕ್ಕೂ ಕಾರಣವಾಗಿತ್ತು.