ಬೆಂಗಳೂರು, ಆ. 20 (DaijiworldNews/SM): ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ನಡುವೆ ಗುಣಮುಖರಾಗುವವರ ಸಂಖ್ಯೆ ಕೂಡ ಉತ್ತಮವಾಗಿದೆ. ಸದ್ಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ನಡೆಯುತ್ತಿದೆ. ಕೋವಿಡ್ ಸಂಬಂಧಿಸಿದಂತೆ ಪರೀಕ್ಷೆ ನಡೆಸಲು ನಿರಾಕರಿಸುವ ಖಾಸಗಿ ಪ್ರಯೋಗಾಲಯದ ವಿರುದ್ಧ ಕಠಿಣ ಕ್ರಮಕ್ಕೆ ಸರಕಾರ ಮುಂದಾಗಿದೆ. ಒಂದೊಮ್ಮೆ ಪರೀಕ್ಷೆ ನಡೆಸಲು ನಿರಾಕರಿಸಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರದಂದು ಸಚಿವರು ಸರಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ವೀಡಿಯೋ ಸಂವಾದ ನಡೆಸಿದರು. ಹಾಗೂ ಈ ಸೂಚನೆಯನ್ನು ಎಲ್ಳಾ ಮುಖ್ಯಸ್ಥರಿಗೆ ಸಚಿವರು ನೀಡಿದ್ದಾರೆ. ಕೆಲವೊಂದು ಪ್ರಯೋಗಾಲಯಗಳು ಪರೀಕ್ಷೆಗೆ ಹಿಂದೇಟು ಹಾಕುತ್ತಿವೆ ಎಂಬ ಬಗ್ಗೆ ಆರೋಪಗಳು ವ್ಯಕ್ತವಾಗುತ್ತಿವೆ. ಈ ಕಾರಣದಿಂದಾಗಿ ಪರೀಕ್ಷೆಗೆ ಹಿಂದೇಟು ಹಾಕುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.ಯಾರೂ ಕೂಡ ಪರೀಕ್ಷೆಗೆ ನಿರಾಕರಿಸುವಂತಿಲ್ಲ ಎಂದಿದ್ದಾರೆ.
ಪ್ರತೀ ನಿತ್ಯ 1 ಲಕ್ಷ ಪರೀಕ್ಷೆ ನಡೆಸುವ ಗುರಿಯನ್ನು ಸರಕಾರ ಹೊಂದಿದೆ. ಆ ಮೂಲಕ ಸೋಂಕಿತರನ್ನು ಪತ್ತೆ ಹಚ್ಚಿ ಕೊರೊನಾ ನಿಯಂತ್ರಣಕ್ಕೆ ತರುವುದೊಂದೇ ಸರಕಾರದ ಗುರಿಯಾಗಿದೆ.