ಆಂಧ್ರಪ್ರದೇಶ, ಆ 21 (DaijiworldNews/PY): ಆಂಧ್ರ ಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಬಂದಪಲ್ಲಿ ಗ್ರಾಮದಲ್ಲಿ ಗುರುವಾರ ಹಾಲು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ 15 ಮಂದಿ ಅಸ್ವಸ್ಥರಾಗಿದ್ದಾರೆ.
ಪುಟಾಲುಪುಟ್ಟು ಬಳಿಯ ಹ್ಯಾಟ್ಸನ್ ಹಾಲು ಸಂಸ್ಕರಣಾ ಘಟಕದಲ್ಲಿ ಸುಮಾರು ಸಂಜೆ 5 ಗಂಟೆಯ ವೇಳೆಗೆ ಅಮೋನಿಯಾ ಸೋರಿಕೆಯಾದ ಘಟನೆ ಬಗ್ಗೆ ಮಾಹಿತಿ ದೊರಕಿದ್ದು, ಈ ವೇಳೆ ಹಾಲು ಸಂಸ್ಕರಣಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರು ಸಿಬ್ಬಂದಿಗಳು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ತಿರುಪತಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸುಮಾರು 15 ಮಂದಿ ಇದರಲ್ಲಿ ಅಸ್ವಸ್ಥಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಚಿತ್ತೂರು ಜಿಲ್ಲಾಧಿಕಾರಿ ನಾರಾಯಣ ಭರತ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಈ ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿ ತಿಳಿಸಿದ್ದಾರೆ.