ಬೆಂಗಳೂರು, ಆ 21 (DaijiworldNews/PY): ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ(95) ಅವರು ನಿಧನರಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿರುವ ಅವರು, ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು ಎಂದಿದ್ದಾರೆ.