ನವದೆಹಲಿ, ಆ. 21 (DaijiworldNews/HR): ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗುತ್ತಿಲ್ಲ ಹಾಗಾಗಿ ವೆಂಟಿಲೇಟರ್ ನ ಬೆಂಬಲದಲ್ಲಿದ್ದಾರೆ ಎಂದು ಆಸ್ಪತ್ರೆ ಶುಕ್ರವಾರ ತಿಳಿಸಿದೆ.
ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ತಿಳಿಸಿದೆ.
ಆಗಸ್ಟ್ 10ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮೆದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಬ್ರೇನ್ ಸರ್ಜರಿ ಮಾಡಲಾಗಿತ್ತು.