ಕೊಚ್ಚಿ, ಆ. 21 (DaijiworldNews/HR): ಅಕ್ರಮ ಚಿನ್ನ ಸಾಗಾಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸ್ವಪ್ನಾ ಸುರೇಶ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಸ್ವಪ್ನಾ ಸುರೇಶ್ ಜಾರಿ ನಿರ್ದೇಶನಾಲಯದ ಎದುರು ಒಪ್ಪಿಕೊಂಡಿದ್ದಾಗಿ ಅರ್ಜಿ ವಜಾಗೊಳಿಸಿರುವ ವಿಶೇಷ ಪಿಎಂಎಲ್ಎ ನ್ಯಾಯಾಲಯ ಹೇಳಿದೆ.
ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿಯಲ್ಲಿ ಸ್ವಪ್ನಾ ಸುರೇಶ್ ಹಾಗೂ ಮತ್ತಿತರರನ್ನು ರಾಷ್ಟ್ರೀಯ ತನಿಖಾ ದಳದವರು ಬಂಧಿಸಿ, ಜಾರಿ ನಿರ್ದೇಶನಾಲಯ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು.
ಇನ್ನು ಸ್ವಪ್ನಾ ಸುರೇಶ್ ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವಾರು ರಾಜಕಾರಣಿಗಳು ಮಾತ್ರವಲ್ಲದೇ ಭಯೋತ್ಪಾದಕರ ಲಿಂಕ್ ಕೂಡ ಇದೆ ಎನ್ನುವುದು ಇದಾಗಲೇ ತನಿಖೆಯಿಂದ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಬಂಧನವಾಗಿದ್ದ ಸ್ವಪ್ನಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು.