ಮೈಸೂರು, ಆ. 23(DaijiworldNews/HR): ನಂಜನಗೂಡು ತಾಲೂಕು ವೈದ್ಯಾಧಿಕಾರಿಯಾದ ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಓ ಅಮಾನತು ಮಾಡಬೇಕೆಂದು ಒತ್ತಾಯಿಸಿ ವೈದ್ಯರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಿನಲ್ಲಿಂದು ರಾಜ್ಯ ಸರ್ಕಾರಿ ವೈದ್ಯರ ಸಂಘದ ಸಭೆ ನಡೆಯಲಿದ್ದು, ಮುಂದಿನ ಹೋರಾಟದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ವೈದ್ಯರ ಮುಂದಿನ ಹೋರಾಟ ನಡೆಯಲಿದೆ ಎಂದು ತಿಳಿದು ಬಂದಿದೆ.
ವೈದ್ಯಾಧಿಕಾರಿ ನಾಗೇಂದ್ರ ಅವರು ಸಿಇಓ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕಾರಣದಿಂದ ಸಿಇಓ ಅಮಾನತು ಮಾಡಬೇಕು, ಮತ್ತು ಒತ್ತಡ ಕಡಿಮೆ ಮಾಡಿ ಹಲವು ಬೇಡಿಕೆ ಮುಂದಿಟ್ಟು ಹೋರಾಟ ಮಾಡುವುದಾಗಿ ವೈದ್ಯರು ಆಗ್ರಹಿಸುತ್ತಿದ್ದಾರೆ.