ಬೆಂಗಳೂರು, ಆ. 23 (DaijiworldNews/MB) : ''ಹಿಂದಿ ಬಾರದ ಕಾರಣಕ್ಕೆ ಮಿಕ್ಕೆಲ್ಲ ಭಾಷೆಗಳ ಜನ ಇನ್ನೆಷ್ಟು ತ್ಯಾಗ ಮಾಡಬೇಕು'' ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹಿಂದಿ ಭಾಷೆ ಹೇರಿಕೆ ವಿರುದ್ದ ಮತ್ತೆ ಧ್ವನಿ ಎತ್ತಿದ್ದಾರೆ.
ಇತ್ತೀಚೆಗೆ ಆನ್ಲೈನ್ ಮೂಲಕ ನಡೆದ ವರ್ಚುವಲ್ ಸಭೆಯೊಂದರಲ್ಲಿ ಆಯುಷ್ ಕಾರ್ಯದರ್ಶಿ, ವೈದ್ಯ ರಾಜೇಶ್ ಕೊಟೆಚ, ಹಿಂದಿ ಭಾಷೆ ಗೊತ್ತಿಲ್ಲದಿದ್ರೆ ಸಭೆಯಿಂದ ಹೊರಹೋಗಬಹುದು ಎಂದು ಹೇಳಿದ್ದು ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದಕ್ಕೂ ಮುನ್ನ ಡಿಎಂಕೆ ಸಂಸದೆ ಕನಿಮೋಳಿ ಅವರಿಗೆ ನೀವು ಭಾರತೀಯರೇ? ಎಂದು ಸಿಬ್ಬಂದಿ ಪ್ರಶ್ನಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಹಿಂದಿ ಹೇರಿಕೆಯ ಬಗ್ಗೆ ಆಕ್ರೋಶ ಭುಗಿಲೆದ್ದಿದೆ. ಹೆಚ್ಡಿ ಕುಮಾರಸ್ವಾಮಿ ಅವರು ಕೂಡಾ ಹಿಂದಿ ಹೇರಿಕೆ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ 'ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ,' ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ?'' ಎಂದು ಪ್ರಶ್ನಿಸಿದ್ದಾರೆ.
''ಸಂವಿಧಾನ ಬದ್ಧ 'ಒಕ್ಕೂಟ ವ್ಯವಸ್ಥೆ' ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ?'' ಎಂದು ಕೇಳಿದ್ದಾರೆ.
''ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು'' ಎಂದು ಹೇಳಿದ್ದಾರೆ.
ಹಿಂದಿ ಬಾರದ