ಬಳ್ಳಾರಿ, ಆ. 23 (DaijiworldNews/MB) : ನಿಯಮಿತ ಕೊರೊನಾ ಚಿಕಿತ್ಸೆಯ ಜೊತೆಗೆ, ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಸಂಗೀತ ಚಿಕಿತ್ಸೆ ನೀಡಲಾಗುತ್ತಿದೆ. ಇದು ಸೋಂಕಿತರಿಗೆ ಸಹಾಯ ಮಾಡುತ್ತಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು, "ನಾವು ಎಲ್ಲಾ ರೋಗಿಗಳಿಗೆ ಸಂಗೀತ ಚಿಕಿತ್ಸೆಯನ್ನು ನೀಡುತ್ತಿದ್ದೇವೆ" ಎಂದು ಹೇಳಿದ್ದಾರೆ.
ನಗರದ ಕೊರೊನಾ ಆಸ್ಪತ್ರೆಯಲ್ಲಿ ಸೋಂಕಿತರು ಸಂತೋಷದಿಂದ ಚಪ್ಪಾಳೆ ತಟ್ಟುವ, ನೃತ್ಯ ಮಾಡುವ, ಹಾಡು ಹಾಡುವ ವಿಡಿಯೋವನ್ನು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸೋಂಕಿತ ಯುವಕನೋರ್ವ ಮೈಕ್ನಲ್ಲಿ ಬೊಂಬೆ ಹೇಳುತೈತೆ ಹಾಡನ್ನು ಹಾಡುವ ವಿಡಿಯೋ ಇದೀ ವೈರಲ್ ಆಗಿದ್ದು ಕೊರೊನಾ ರೋಗಿಗಳು ಸಂಗೀತವನ್ನು ಆಲಿಸಿ ಆನಂದಿಸಿದ್ದಾರೆ. ಹಾಗೆಯೇ ಮೈಕ್ನ್ನು ನೀಡಿರುವ ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುವುದು ವಿಡಿಯೋದಲ್ಲಿ ಕಾಣ ಬಹುದಾಗಿದೆ.
ಸಂಗೀತ ಚಿಕಿತ್ಸೆಯ ಜೊತೆಗೆ, ಆಸ್ಪತ್ರೆಯ ಅಧಿಕಾರಿಗಳು ರೋಗಿಗಳಿಗೆ ಯೋಗ ಮತ್ತು ಉಸಿರಾಟದ ವ್ಯಾಯಾಮ ಮಾಡಲು ಮಾರ್ಗದರ್ಶನ ನೀಡುತ್ತಿದ್ದಾರೆ. ಕೊರೊನಾ ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇತೃತ್ವದಲ್ಲಿ ಮಾಡಲಾಗಿರುವ ಈ ವಿನೂತನ ಪ್ರಯೋಗಗಳು ಇದೀಗ ಜನ ಮನ್ನಣೆಗೆ ಪಾತ್ರವಾಗಿದೆ.
ಈ ಮೊದಲು ಕೊರೊನಾ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಗೀತೆ ಧ್ವನಿ ವರ್ಧಕದಲ್ಲಿ ಪ್ರಸಾರ ಮಾಡುವ ಮೂಲಕ ಚೊಕ್ಕದಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಅವಕಾಶ ನೀಡಲಾಗಿತ್ತು. ಆಚರಣೆಯ ಅಂಗವಾಗಿ ವೈದ್ಯರು ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದ್ದರು.
ಬಳ್ಳಾರಿಯಲ್ಲಿ