ಬೆಂಗಳೂರು, ಆ. 24 (DaijiworldNews/MB) : ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.27ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.