ಗುವಾಹಟಿ, ಆ 24 (DaijiworldNews/MSP): ಇಂದು ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಈಗಾಗಲೇ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷೆಯಾಗಿದ್ದಂತ ಸೋನಿಯಾ ಗಾಂಧಿಯವರು ರಾಜೀನಾಮೆ ಸಲ್ಲಿದ್ದಾರೆ. ಈ ನಡುವೆ ಅಸ್ಸಾಂ ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ಪಕ್ಷದ ನಾಯಕತ್ವವನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸಬೇಕು ಎಂದು ಒತ್ತಾಯ ಮಾಡಿದ್ದು , "ಪ್ರಧಾನಿ ಮೋದಿ ನರೇಂದ್ರ ಮೋದಿ ಭಯಪಡುವ, ಏಕೈಕ ನಾಯಕನೆಂದರೆ ಅದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ" ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ, “ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜ್ಯಸಭಾ ಸಂಸದರೊಂದಿಗೆ ಈ ಹಿಂದೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ,ಕಾಂಗ್ರೆಸ್ ಪಕ್ಷದ ನಾಯಕತ್ವವನ್ನು ರಾಹುಲ್ ಗಾಂಧಿಗೆ ನೀಡುವಂತೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದೇನೆ. ಯಾಕೆಂದರೆ ನರೇಂದ್ರ ಮೋದಿ ಭಯಭೀತರಾಗುವುದು . ರಾಹುಲ್ ಗಾಂಧಿಯವರ ಮಾತ್ರ ಎಂದು ವಿವರಿಸಿದ್ದಾರೆ.
ಪಕ್ಷದ ನಾಯಕತ್ವವನ್ನು ಪ್ರಶ್ನಿಸಿ ಕೆಲವು ಹಿರಿಯ ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಬೋರಾ ಅವರು ತಮ್ಮ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿಯನ್ನು ರಾಹುಲ್ ಗಾಂಧಿಗೆ ನೀಡುವಂತೆ ಕೋರಿ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಅವರಿಗೆ ನಾಯಕತ್ವ ನೀಡಿದರೆ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಬಹುದು ಮತ್ತು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಹೋರಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.