ಬೆಂಗಳೂರು, ಆ. 25 (DaijiworldNews/MB) : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ವರದಿ ತಿಳಿಸಿದೆ.
ಡಿ.ಕೆ.ಶಿ ಅವರು ಮಂಗಳವಾರ ಬೆಳಿಗ್ಗೆ ಸುಗುಣ ಆಸ್ಪತ್ರೆಗೆ ತೆರಳಿ ಕೊರೊನಾ ತಪಾಸಣೆಗೆ ಒಳಗಾಗಿದ್ದು ವರದಿ ಪಾಸಿಟಿವ್ ಆಗಿದೆ. ಸದ್ಯ ಚಿಕಿತ್ಸೆಗಾಗಿ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕೆಲವು ದಿನಗಳಿಂದ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆಶಿಯವರು ಸೋಮವಾರದಿಂದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಈ ಮೊದಲು ಕಾಂಗ್ರೆಸ್ ಮುಂಖಡ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಗುಣಮುಖರಾಗಿ ಮನೆಗೆ ವಾಪಾಸ್ ಆಗಿದ್ದಾರೆ.