ಬೆಂಗಳೂರು, ಆ 25 (DaijiworldNews/PY): ಕೊರೊನಾ ಸಂಕಷ್ಟದಿಂದ ಕ್ಷೇತ್ರಗಳ ಅಭಿವೃದ್ದಿ ಕಾರ್ಯಗಳು ನಿಧಾನವಾಗಿ ಸಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕರ ಅನುದಾನ ಕಡಿತ ಮಾಡದೆ ಬಿಡುಗಡೆ ಮಾಡಿ ಎಂದು ಸಿಎಂ ಬಿಎಸ್ವೈ ಅವರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕೊರೊನಾದಿಂದ ಸಂಕಷ್ಟ ಉಂಟಾಗಿದ್ದು, ಕ್ಷೇತ್ರಗಳ ಅಭಿವೃದ್ದಿ ಕಾಮಗಾರಿ ಕಾರ್ಯಗಳು ಕುಂಠಿತವಾಗಿವೆ. ಈ ನಿಟ್ಟಿನಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಘೋಷಣೆ ಮಾಡಿದ್ದ ಅನುದಾನವನ್ನು ಕಡಿತ ಮಾಡದೇ ಬಿಡುಗಡೆ ಮಾಡಿ. ರಾಜ್ಯದ ಎಲ್ಲಾ ಶಾಸಕರಿಗೆ ನೀಡಲಾಗಿದ್ದ ಅನುದಾನವನ್ನು ಪೂರ್ಣವಾಗಿ ಬಿಡುಗಡೆ ಮಾಡುವಂತೆಯೂ ಕೋರಿದ್ದಾರೆ.
ಕೊರೊನಾ ಸಂದರ್ಭ ಜಾರಿ ಮಾಡಲಾದ ಲಾಕ್ಡೌನ್ ಬಳಿಕ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಅಲ್ಲದೇ, ಅಭಿವೃದ್ದಿ ಕಾರ್ಯಗಳು ಕೂಡಾ ನಿಧಾನಗತಿಯಲ್ಲಿವೆ. ಈ ಹಿನ್ನೆಲೆ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.