ರಾಯಗಡ, ಆ. 26 (DaijiworldNews/MB) : ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು ಇದೀಗ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ.
5 ಅಂತಸ್ತಿನ ಕಟ್ಟಡ ಬೀಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೀಘ್ರವೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು 60 ಮಂದಿಯನ್ನು ರಕ್ಷಣೆ ಮಾಡಿದ್ದರು. ಈ ಕಟ್ಟಡದ ಅವಶೇಷದಡಿ 18 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇಬ್ಬರು ಸಾವನ್ನಪ್ಪಿದ್ದರು. ಇದೀಗ ಮತ್ತೆ 11 ಮೃತದೇಹ ಮತ್ತೆಯಾಗಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ.
7 ವರ್ಷ ಹಳೆಯ ಕಟ್ಟಡದಲ್ಲಿ 45 ಫ್ಲ್ಯಾಟ್ಗಳಿದ್ದವು ಎಂದು ಹೇಳಲಾಗಿದೆ. ಕಟ್ಟಡದ ಗುತ್ತಿಗೆದಾರ ಮತ್ತು ವಾಸ್ತುಶಿಲ್ಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ಕೂಡಾ ಆಗಮಿಸಿ ರಕ್ಷಣಾ ಕಾರ್ಯಚರಣೆ ನಡೆಸಿತ್ತು. ಹಾಗೆಯೇ ಸುಮಾರು 12 ಅಗ್ನಿಶಾಮಕ ದಳದ ತಂಡ ಇತ್ತು ಎಂದು ಹೇಳಲಾಗಿದೆ.
ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಸಹಾಯ ನೀಡುವುದಾಗಿ ಮಹಾರಾಷ್ಟ್ರದ ಸಚಿವ ವಿಜಯ್ ವಾಡೆಟ್ಟಿವಾರ್ ತಿಳಿಸಿದ್ದಾರೆ.