ನವದೆಹಲಿ, ಆ 26 (DaijiworldNews/PY): ದುಬಾರಿ ಪೆಟ್ರೋಲ್ ಹಾಗೂ ಬೆಲೆ ಏರಿಕೆ ಮೂಲಕ ಜನರನ್ನು ಸರ್ಕಾರವು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದರ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ದುಬಾರಿ ಪೆಟ್ರೋಲ್ ಹಾಗೂ ಬೆಲೆ ಏರಿಕೆ ಮೂಲಕ ಜನರನ್ನು ಸರ್ಕಾರವು ಬಹಿರಂಗವಾಗಿ ಲೂಟಿ ಮಾಡುತ್ತಿದೆ ಎಂದಿದ್ದಾರೆ. .
ಸತತ ಆರನೇ ದಿನವೂ ಕೂಡಾ ಪೆಟ್ರೋಲ್ ಬೆಲೆ ಏರಿಕೆಯಾಗಿರುವ ಕಾರಣ ಕೇಂದ್ರ ಸರ್ಕಾರದ ವಿರುದ್ದ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಆರ್ಥಿಕತೆಯ ವಿಚಾರವಾಗಿಯೂ ಕೂಡಾ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಆರೋಪಿಸುತ್ತಲೇ ಇದ್ದಾರೆ.