ಕೊಪ್ಪಳ, ಆ 26 (DaijiworldNews/PY): ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ತಹಶೀಲ್ದಾರ್ ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ರೊಮ್ಯಾನ್ಸ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.
ಪ್ರಸ್ತುತ ಜಿಲ್ಲೆಯ ಕುಷ್ಟಗಿಯಲ್ಲಿನ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಗುರುಬಸವರಾಜ್ ಮಾಡಿದ್ದ ರಾಸಲೀಲೆ ಪ್ರಕರಣ ಈಗ ಬೆಳಕಿಗೆ ಬಂದಿದೆ.
ಗುರುಬಸವರಾಜ್ ಎರಡು ತಿಂಗಳ ಹಿಂದೆ ಕುಷ್ಟಗಿ ತಹಶೀಲ್ದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ, ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯ ಒಳಗೆ ಕಿಸ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಆ ದೃಶ್ಯ ವೈರಲ್ ಆಗಿದೆ.
ಕುಷ್ಟಗಿಯ ತಹಶೀಲ್ದಾರ್ ಆಗಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಅವರು ಅಲ್ಲಿಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಇದೀಗ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಶೀಘ್ರವೇ ಇವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.