ಬೆಂಗಳೂರು, ಆ 26 (DaijiworldNews/PY): ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಶಾಲಾರಂಭಕ್ಕೆ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ಕೆಲವು ಕ್ಷೇತ್ರಗಳಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯದೇ ಅಕ್ಟೋಬರ್ನಿಂದ ಶಾಲೆಗಳನ್ನು ತೆರೆಯುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ಟೋಬರ್ನಿಂದ ಶಾಲಾ-ಕಾಲೇಜುಗಳನ್ನು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೇ ಆದಲ್ಲಿ ಅಕ್ಟೋಬರ್ನಿಂದ ಶಾಲಾರಂಭದ ಬಗ್ಗೆ ಚಿಂತನೆ ಇದೆ ಎಂದಿದ್ದಾರೆ.