ನವದೆಹಲಿ, ಆ. 26 (DaijiworldNews/MB) : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೀರ್ಘ ಕೋಮಾದಲ್ಲಿದ್ದು ಸದ್ಯ ವೆಂಟಿಲೇಟರ್ ಸಹಾಯ ನೀಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ತಿಳಿಸಿದೆ.
ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ, ಪ್ರಸ್ತುತ ಮುಖರ್ಜಿ ಅವರಿಗೆ ಶ್ವಾಸಕೋಶದ ಸೋಂಕಿಗಾಗು ಚಿಕಿತ್ಸೆ ನೀಡಲಾಗುತ್ತಿದ್ದು ಮಂಗಳವಾರದಿಂದ ಅವರ ಮೂತ್ರಪಿಂಡದ ಶಕ್ತಿ ಕೊಂಚ ಕ್ಷೀಣಿಸಿದೆ ಎಂದು ತಿಳಿಸಿದೆ.
ಆಗಸ್ಟ್ 10ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖರ್ಜಿ ಅವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮೆದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಮೆದುಳು ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.