ಕೋಲ್ಕತಾ, ಆ. 26 (DaijiworldNews/SM): ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರೆಸಲಾಗಿದೆ. ಸೆಪ್ಟೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ನೀಡಲಾಗಿದೆ. ಸೆ.7, 11 ಹಾಗೂ 12 ರಂದು ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಈ ನಡುವೆ ದೆಹಲಿ, ಮುಂಬೈ ಹಾಗೂ ಚೆನ್ನೈ ಸೇರಿದಂತೆ ಆರು ನಗರಗಳಿಂದ ಪಶ್ಚಿಮ ಬಂಗಾಳಕ್ಕೆ ತೆರಳುವ ವಿಮಾನಗಳ ಮೇಲಿದ್ದ ನಿರ್ಬಂಧ ಸಡಿಲಿಸಲಾಗಿದೆ. ಸೆಪ್ಟೆಂಬರ್ 1ರಿಂದ ವಾರದಲ್ಲಿ ಮೂರು ದಿನ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಸಿಎಂ ಮಮತಾ ಬ್ಯಾನರ್ಜಿ ಲೋಕಲ್ ರೈಲು ಹಾಗೂ ಮೆಟ್ರೋ ಸಂಚಾರಕ್ಕೂ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಶಾಲಾ ಕಾಲೇಜ್ ಗಳು ಸೆಪ್ಟೆಂಬರ್ 20ರ ವರೆಗೆ ತೆರೆಯುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.