ಮುಂಬೈ, ಆ.27(DaijiworldNews/HR): ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿತ್ತಿಲ್ಲ ಎಂದು ಅಸಮಾಧಾನಗೊಂಡು ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಜಯ್ ಜಾಧವ್ ತಮ್ಮ ರಾಜೀನಾಮೆ ಪತ್ರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ.
ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಸಾಧ್ಯವಾಗುತ್ತಿಲ್ಲಆದ ಕಾರಣ ನನಗೆ ಸಂಸದನಾಗಿರಲು ನನಗೆ ಹಕ್ಕಿಲ್ಲ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ' ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಇನ್ನು ಪರಭಾನಿ ಜಿಲ್ಲೆಯ ಜಿಂತೂರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸರ್ಕಾರೇತರ ಆಡಳಿತಾಧಿಕಾರಿ ನೇಮಕಕ್ಕೆ ಜಾಧವ್ ಅವರು ಅಸಮಾಧಾನ ವ್ಯಕ್ತಪಡಿಸಿ, ಪರಭಾನಿಯ ಜಿಂತೂರ್ ಎಪಿಎಂಸಿಯ ಆಡಳಿತಾಧಿಕಾರಿಗಳ ನೇಮಕ ಕುರಿತು ಕಳೆದ 8-10 ತಿಂಗಳಿಂದ ನಾನು ಪ್ರಯತ್ನ ನಡೆಸುತ್ತಾ ಬಂದಿದ್ದೇನೆ. ಈಗ ಎನ್ಸಿಪಿಯ ವ್ಯಕ್ತಿಯೊಬ್ಬರನ್ನು ಸರ್ಕಾರೇತರ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದು ಶಿವಸೇನೆ ಕಾರ್ಯಕರ್ತರಿಗೆ ಮಾಡಿದ ಅವಮಾನ,' ಎಂದು ಜಾಧವರ್ ಹೇಳಿದ್ದಾರೆ.