ಬೆಂಗಳೂರು, ಆ.27(DaijiworldNews/HR): ಟಿಪ್ಪುಸುಲ್ತಾನ್ ಬಗ್ಗೆ ಬಿಜೆಪಿ ಪಕ್ಷವು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದು, ಪಾಠ ಪುಸ್ತಕದಿಂದಲೂ ಟಿಪ್ಪು ಪಠ್ಯ ಕೈಬಿಡಬೇಕೆಂದು ಒತ್ತಾಯ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಟಿಪ್ಪುಸುಲ್ತಾನ್ ಪಾಠವನ್ನು ಪಠ್ಯದಿಂದ ಕೈ ಬಿಟ್ಟಿಲ್ಲ. 5 ನೇತರಗತಿಯ ಬದಲು 7ನೇ ತರಗತಿಯಲ್ಲಿ ಟಿಪ್ಪು ಪಾಠ ಸೇರಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಸಂಗೊಳ್ಳಿ ರಾಯಣ್ಣ ಬ್ರಿಟೀಷರ ವಿರುದ್ಧ ಯಾವ ರೀತಿಯಾಗಿ ಹೋರಾಡಿದ್ದಾರೆ ಅಂತೆಯೇ ಟಿಪ್ಪು ಸುಲ್ತಾನ್ ಕೂಡ ಹೋರಾಟ ನಡೆಸಿದ್ದು, ಟಿಪ್ಪು ವೀರಯೋಧನಾಗಿದ್ದಾರೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಆರ್. ಅಶೋಕ, ಟಿಪ್ಪು ಕುರಿತರಾಗಿ ವಿಶ್ವನಾಥ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲ. ಆದರೆ ಟಿಪ್ಪು ಕುರಿತಾಗಿ ನಮ್ಮ ನಿಲುವಿನಲ್ಲಿ ಯಾವುದೇ ರೀತಿಯಾ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ಕೂಡ ಟಿಪ್ಪು ಕುರಿತ ನಮ್ಮ ನಿಲುವಿನಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.
ಹೆಚ್. ವಿಶ್ವನಾಥ್ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಟಿಪ್ಪು ಕುರಿತಾದ ಅವರ ಹೇಳಿಕೆಯಿಂದ ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗುತ್ತಿದ್ದು, ಸಚಿವ ಸ್ಥಾನದ ಮೇಲೆಯೂ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ.