ಬೆಂಗಳೂರು, ಆ.27(DaijiworldNews/HR): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನತ್ಯಾಜ್ಯ ಘಟಕದಿಂದ ಉಂಟಾಗಿರುವ ಅನಾಹುತಗಳ ವಿಚಾರವಾಗಿ ಸಲ್ಲಿಕೆಯಾಗಿರುವಂತಹ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಾದೀಶ ಎ ಎಸ್ ಓಕ್ ನೇತೃತ್ವದ ವಿಭಾಗಿಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ಬಳಿಕ ಕೆಲ ಕಾಲ ನಡೆದ ವಾದ ಆಲಿಸಿದ ನ್ಯಾಯ ಪೀಠ ಅರ್ಜಿ ಸಂಬಂಧ, ರಾಜ್ಯ ಸರಕಾರ, ಕೇಂದ್ರ ಪರಿಸರ ಸಚಿವಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಸಚಿವಾಲಯ, ಕೇಂದ್ರ ಮಾಲಿನ್ಯ ನಿಯಂತಣ ಮಂಡಳಿ, ಮಂಗಳೂರು ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಸೆ 16 ಕ್ಕೆ ಮುಂದೂಡಿದೆ.