ಬೆಂಗಳೂರು, ಆ 27 (DaijiworldNews/PY): ಎಲ್ಲರ ವಿರೋಧದ ಹೊರತಾಗಿಯೂ ಕೂಡಾ ಜೆಇಇ ಹಾಗೂ ನೀಟ್ ಪರೀಕ್ಷೆ ನಡೆಸುವ ಬಿಜೆಪಿ ಸರ್ಕಾರದ ತೀರ್ಮಾನ ಅಚಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಲ್ಲರ ವಿರೋಧದ ಹೊರತಾಗಿಯೂ ಕೂಡಾ ಜೆಇಇ ಹಾಗೂ ನೀಟ್ ಪರೀಕ್ಷೆ ನಡೆಸುವ ತೀರ್ಮಾನಕ್ಕೆ ಬಿಜೆಪಿ ಸರ್ಕಾರ ಅಚಲವಾಗಿದೆ. ದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ವ್ಯಾಪಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳು ಅಪಾಯ ಎದುರಿಸಬೇಕಾಗುತ್ತದೆ. ಪರೀಕ್ಷೆ ಬರೆಯಲು ಅವರು ತಮ್ಮ ಪ್ರಾಣ ಪಣಕ್ಕಿಡಬೇಕಾ? ಎಂದು ಪ್ರಶ್ನಿಸಿದ್ದಾರೆ.
ವಿದ್ಯಾರ್ಥಿಗಳಿ ಪ್ರಯಾಣ ಸೂಕ್ತವಲ್ಲ. ಅಲ್ಲದೇ ವಸತಿಯೂ ಕೂಡಾ ಕಷ್ಟ. ಇದರೊಂದಿಗೆ ಸಾರ್ವಜನಿಕ ಸಾರಿಗೆ ಕೂಡಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನೂ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತ ಆಸಕ್ತಿ ಹೊಂದಿಲ್ಲ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಯುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಸೂಕ್ಷ್ಮ ವಹಿಸಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದಿದ್ದಾರೆ.