ನವದೆಹಲಿ, ಆ 28(DaijiworldNews/HR): ಡಿ.ಕೆ. ಶಿವಕುಮಾರ್ ವಿರುದ್ಧಆದಾಯ ತೆರಿಗೆ ಅಧಿಕಾರಿಗಳು ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಡಿ.ಕೆ ಶಿವಕುಮಾರ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಕ್ರಿಮಿನಲ್ ಮೊಕದ್ದಮೆ ತಡೆಹಿಡಿಯಬೇಕು ಎಂದು ಒತ್ತಾಯಿಸಿದ್ದು ಮಧ್ಯಂತರ ತಡೆ ನೀಡದಿದ್ದರೆ ಶಿವಕುಮಾರ್ ಗೆ ಸರಿಪಡಿಸಲಾಗದ ಹಾನಿಯಾಗುತ್ತದೆ ಎಂದು ತಿಳಿಸಿದ್ದಾರೆ
ಇನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ಹಾಗೂ ನ್ಯಾಯಮೂರ್ತಿಗಳಾದ ಎಸ್.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಆದಾಯ ತೆರಿಗೆ ಇಲಾಖೆಗೆ ಈ ಪ್ರಕರಣದಲ್ಲಿ ಉತ್ತರ ಸಲ್ಲಿಸಲು ಅವಕಾಶ ನೀಡಿದೆ ಎಂದು ತಿಳಿದು ಬಂದಿದೆ.
ಆದಾಯ ತೆರಿಗೆ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಅನ್ವಯ ಐಟಿ ಇಲಾಖೆ ಡಿಕೆಶಿ ಮತ್ತು ಇತರ ಕೆಲವರ ವಿರುದ್ಧ ದೂರು ದಾಖಲಿಸಿದೆ.
ಐಟಿ ಅಧಿಕಾರಿಗಳು ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಬೇಕೆಂದು ಶಿವಕುಮಾರ್ ಪರ ವಕೀಲ ಮುಕುಲ್ ರೋಹಟಗಿ, ಎಸ್. ಗಣೇಶ್ ಮನವಿ ಮಾಡಿದ್ದಾರೆ.
ಅರ್ಜಿಯ ವಿಚಾರಣೆ ಮಾಡಿದ ಕೋರ್ಟ್ ಮುಖ್ಯನ್ಯಾಯಮೂರ್ತಿಗಳಿದ್ದ ಮೂರು ಸದಸ್ಯ ಪೀಠ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದೆ. ಶಿವಕುಮಾರ್ ಅವರ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಐಟಿ ಇಲಾಖೆಗೆ ಎರಡು ವಾರ ಸಮಯ ನೀಡಿದೆ ಎಂದು ತಿಳಿದು ಬಂದಿದೆ.