ನವದೆಹಲಿ, ಆ 28(DaijiworldNews/HR): ಜುಲೈ 29ರಂದು ಭಾರತಕ್ಕೆ ಬಂದಿಳಿದ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನಗಳು ಸೆ. 10 ರಂದು ಅಧಿಕೃತವಾಗಿ ವಾಯುಸೇನೆಗೆ ಸೇರ್ಪಡೆಗೊಳ್ಳಲಿದೆ.
ಸೆಪ್ಟೆಂಬರ್ 10 ರಂದು ರಾಜನಾಥ್ ಸಿಂಗ್ ಅವರು ರಫೇಲ್ ಯುದ್ಧ ವಿಮಾನಗಳನ್ನು ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಿದ್ದು ಈ ಕಾರ್ಯಕ್ರಮಕ್ಕೆ ಫ್ರಾನ್ಸ್ನ ರಕ್ಷಣಾ ಸಚಿವ ಪ್ಲೋರೆನ್ಸ್ ಪಾರ್ಲಿ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಭಾರತೀಯ ವಾಯುಪಡೆಯ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಅತ್ಯಾಧುನಿಕ 36 ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ 2016ರಲ್ಲಿ 59 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಒಪ್ಪಂದ ಮಾಡಿಕೊಂಡಿದ್ದು ಫ್ರಾನ್ಸ್ನಿಂದ ಜುಲೈ 29ರಂದು ಭಾರತಕ್ಕೆ 5 ರಫೇಲ್ ಯುದ್ಧ ವಿಮಾನಗಳು ಬಂದಿದೆ.