ಬೆಂಗಳೂರು, ಆ 28 (DaijiworldNews/PY): ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2ರಿಂದ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಹೇಳಿದ್ದಾರೆ.
ಗುರುವಾರ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನ್ಯಾಯಾಲಯದ ವಿಚಾರಣೆಯಂತೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳ ಪ್ರಕಾರ ತನಿಖೆ ನಡೆಸಲಾಗುವುದು. ವರದಿ ಸಲ್ಲಿಸಲು ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದೆ. ಘಟನೆಯ ಬಗ್ಗೆ ಐಎಎಸ್ ಅಧಿಕಾರಿ ವಿವರಗಳನ್ನು ಸಂಗ್ರಹಿಸಿದರು.
ಗಲಭೆಗೆ ಸಂಬಂಧಪಟ್ಟಂತೆ ಪೊಲೀಸರು ಈವರೆಗೆ 388 ಮಂದಿಯನ್ನು ಬಂಧಿಸಿದ್ದಾರೆ. ಡಿಜೆ ಹಳ್ಳಿ ಠಾಣೆಯಲ್ಲಿ 55 ಪ್ರಕರಣಗಳು ಸೇರಿದಂತೆ ಕೆಜಿ ಹಳ್ಳಿ ಠಾಣೆಯಲ್ಲಿ 16 ಪ್ರಕರಣಗಳು ದಾಖಲಾಗಿದೆ.