ನವದೆಹಲಿ, ಆ 28(DaijiworldNews/HR): ಕೊರೊನಾ ವೈರಸ್ ಕಾರಣದಿಂದ ಅಂತಿಮ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಯುಜಿಸಿ ನಿರ್ದೇಶನದಂತೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಸದೇ ಪಾಸ್ ಮಾಡುವಂತಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಈ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿದೆ.
ಈ ತೀರ್ಪಿನಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದ್ದು, ಪದವಿ ಪರೀಕ್ಷೆ ಆಯೋಜನೆಗೆ ಸಂಬಂಧಿಸಿದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
ಇನ್ನು ದೇಶದೆಲ್ಲೆಡೆ ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸುವಂತೆ ಯುಜಿಸಿ ಜುಲೈ 6ರಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿತ್ತು. ಇದರ ವಿರುದ್ಧ ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಪರೀಕ್ಷೆ ನಡೆಸಲೇ ಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.