ಬೆಂಗಳೂರು, ಆ 28(DaijiworldNews/HR): ರಾಜ್ಯದ ಜನತೆಗೆ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ವಿಜಯಪುರ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ದೇವೇಗೌಡ ಸಭೆ ನಡೆಸಿದ್ದಾರೆ.
ಈ ಬಗ್ಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ರಾಜ್ಯದ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದ ಪ್ರದೇಶಗಳ ಕುರಿತು ಮಾಹಿತಿಯನ್ನು ಕಲೆಹಾಕಲಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳು ಕಳೆದ 2 ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸುತ್ತಿದ್ದು, ಸರ್ಕಾರವು ನೊಂದಂತವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೇವೇಗೌಡ ಆರೋಪಿಸಿದ್ದಾರೆ.