ಬೆಂಗಳೂರು,ಆ 28(DaijiworldNews/HR): ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಗಲಭೆ ಸಂಧರ್ಭದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ವಾಹನಗಳನ್ನು ಹಾನಿ ಮಾಡಿದವರಿಂದಲೇ ನಷ್ಟ ಭರಿಸುವ ಸಂಬಂಧವಾಗಿ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್ ಆಗಿ ಹೈಕೋರ್ಟ್ ನೇಮಿಸಿದೆ.
ಪ್ರಕರಣದ ವಾದ-ವಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಹೈಕೋರ್ಟ್ ಮುಖ್ಯಮಂತ್ರಿ ಅಭಯ್ ಶ್ರೀನಿವಾಸ್ ಒಕಾ ಹಾಗೂ ಅಶೋಕ್.ಎಸ್ ಕಿಣಗಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿತು.
ಸಾರ್ವಜನಿಕರ ಆಸ್ತಿ, ವಾಹನಗಳು, ಎಷ್ಟು ಪ್ರಮಾಣದಲ್ಲಿ ಹಾನಿಯಾಗಿವೆ ಮತ್ತು ಅದರ ಒಟ್ಟು ಮೌಲ್ಯ, ಒಟ್ಟು ನಷ್ಟದ ಅಂದಾಜು ಕುರಿತಂತೆ ತನಿಖೆ ನಡೆಸಲಿದೆ. ವಿಡಿಯೋ ಮೂಲಕ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುವುದು ಹಾಗೂ ನ್ಯಾಯಾಲಯಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಬೇಕೆಂದು ಸೂಚನೆ ನೀಡಿತ್ತು.
ಕ್ಲೇಮ್ ಕಮೀಷನರ್ ಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಸಿಬ್ಬಂದಿ, ವಾಹನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡಬೇಕೆಂದು ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ ಎಂದು ತಿಳಿದು ಬಂದಿದೆ.