ನವದೆಹಲಿ, ಆ 28(DaijiworldNews/HR): ಕೋವಿಡ್ 19 ಕಾರಣದಿಂದ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ಚುನಾವಣೆ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಅರ್ಜಿದಾರರು ವಾದಿಸಿದ್ದರು. ಚುನಾವಣೆ ನಡೆಸದಂತೆ ನಾವು ಚುನಾವಣಾ ಆಯೋಗಕ್ಕೆ ಹೇಳಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದ್ದು, ಕಾಯ್ದೆ ಪ್ರಕಾರ ಪ್ರತಿಕೂಲ ಪರಿಸ್ಥಿತಿಯಲ್ಲಿ ಚುನಾವಣೆ ಮುಂದೂಡಬಹುದು ಎಂದು ಅರ್ಜಿದಾರರು ವಾದ ಮಂಡಿಸಿದರು. ಆದರೆ ಚುನಾವಣೆಯನ್ನು ನಡೆಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಪುನರುಚ್ಚರಿಸಿದೆ.
ಇನ್ನು ಅರ್ಜಿ ಬಗ್ಗೆ ಯಾವುದೇ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ ಆದ ಕಾರಣ ಅಧಿಸೂಚನೆ ಜಾರಿಗೆ ಮೊದಲೇ ಅರ್ಜಿ ಬಗ್ಗೆ ಪುನರ್ ವಿಚಾರ ಸಾಧ್ಯವಿಲ್ಲವೆಂದ ಕೋರ್ಟ್ ಅರ್ಜಿ ವಜಾ ಮಾಡಿದೆ.