ಬೆಂಗಳೂರು, ಆ 28 (DaijiworldNews/PY): ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನಾ ದೃಢ ಪಟ್ಟ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಅವರು, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕರಾದ ಶ್ರೀ ಎಚ್.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸಿ.ಟಿ ರವಿ ಅವರೂ ಕೂಡಾ ಟ್ವೀಟ್ ಮಾಡಿದ್ದು, ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.