ಬೆಂಗಳೂರು, ಆ 29(DaijiworldNews/HR): ಬಿಎಸ್ಸಿ(ಕೃಷಿ) ಮತ್ತು ಡಿಪ್ಲೊಮಾ ಕೋರ್ಸ್ಗಳಿಗೆ ಸೆಪ್ಟಂಬರ್ 2ರಂದು ನಡೆಸಲಿರುವ ಆನ್ಲೈನ್ ಪರೀಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಬಿಎಸ್ಸಿ ವಿದ್ಯಾರ್ಥಿಗಳು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಬಗ್ಗೆ ಪ್ರತಿಕ್ರಿಯೆಯನ್ನು ವಿಶೇಷ ಪೀಠದ ಮುಂದೆ ಸಲ್ಲಿಸುವಂತೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.
ಅನೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ಇಂಟರ್ನೆಟ್ ಸೌಲಭ್ಯ ಇರುವುದಿಲ್ಲ. ಹಾಗಾಗಿ ಆನ್ಲೈನ್ ಪರೀಕ್ಷೆ ನಡೆಸಬಾರದು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.