ನವದೆಹಲಿ, ಆ. 29 (DaijiworldNews/MB) : ಶಾಲೆಗಳು ಪುನರ್ ಆರಂಭ ಮಾಡುವವರೆಗೂ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕ ವಿಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಶಾಲಾ ಆಡಳಿತ ಮಂಡಳಿಗಳಿಗೆ ಶನಿವಾರ ಎಚ್ಚರಿಕೆ ನೀಡಿದೆ.
ಖಾಸಗಿ ಶಾಲೆಯೊಂದರ ಪೋಷಕರ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ನಾಥ್ ಅವರು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕಗಳನ್ನು ಪಡೆಯುವಂತಿಲ್ಲ. ಮುಂದಿನ ಆದೇಶವರೆಗೂ ಪೋಷಕರಿಂದ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕವನ್ನು ಪಡೆಯಬಾರದು ಎಂದು ತಿಳಿಸಿದೆ. ಈ ಸಂಬಂಧ ಹೈಕೋರ್ಟ್ ದೆಹಲಿ ಸರ್ಕಾರ ಮತ್ತು ಖಾಸಗಿ ಶಾಲೆಗೆ ನೋಟಿಸ್ ಜಾರಿಗೊಳಿಸಿದೆ.
ಜುಲೈನಿಂದ ಬೋಧನಾ ಶುಲ್ಕದೊಂದಿಗೆ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕಗಳನ್ನು ಪಡೆಯುತ್ತಿರುವ ಬಗ್ಗೆ ಖಾಸಗಿ ಶಾಲೆಯೊಂದರ ಪೋಷಕರ ಸಂಘ ಸಲ್ಲಿಸಿತ್ತು.