ಬಳ್ಳಾರಿ, ಆ. 30(DaijiworldNews/HR): ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಇಂದು ಬಳ್ಳಾರಿಗೆ ಆಗಮಿಸಬೇಕಿದ್ದ ಕಾರ್ಯಕ್ರಮ ರದ್ದಾಗಿದೆ.
ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿರುವ ಜನಾರ್ಧನ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದ ಕಾರಣ ಆಗಸ್ಟ್ 30 ರ ಬಳ್ಳಾರಿಗೆ ಭೇಟಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಬಳ್ಳಾರಿಯಿಂದ ದೂರ ಇರುವ ಜನಾರ್ಧನ ರೆಡ್ಡಿಗೆ ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಪುಣ್ಯತಿಥಿಯಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಬಳ್ಳಾರಿಗೆ ಹೋಗಲು ಸುಪ್ರೀಂಕೋರ್ಟ್ ಆದೇಶ ನೀಡಿತ್ತು.