ಬೆಂಗಳೂರು, ಆ. 30(DaijiworldNews/HR): ಆಟಿಕೆ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ಮೊದಲ ಆಟಿಕೆ ಉತಾದನಾ ಕ್ಲಸ್ಟರ್ ರನ್ನು ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಿ ಮೋದಿಯವರ ಸ್ವಾವಲಂಬಿ ಭಾರತದ ಪರಿಕಲ್ಪನೆಗೆ ಅನುಗುಣವಾಗಿ ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶವಿದೇಶಗಳ ಅಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕೊಪ್ಪಳದಲ್ಲಿ ಆಟಿಕೆ ಉತ್ಪಾದದನಾ ಕ್ಲಸ್ಟರ್ ಅನ್ನು ಪ್ರಾರಂಭಿಸಲು 400 ಎಕೆರೆ ಜಾಗದಲ್ಲಿ ಗೊಂಬೆ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗುವುದು. ಇದರಿಂದ 5 ವರ್ಷದಲ್ಲಿ 40 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದ್ದಾರೆ.