ಜಮ್ಮು, ಆ. 30 (DaijiworldNews/MB) : ಪಾಕಿಸ್ತಾನವು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಯಾವುದೇ ಪ್ರಚೋದನೆ ಇಲ್ಲದೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ಗುಂಡಿನ ದಾಳಿ ನಡೆಸಿದ್ದು ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿದ್ದಾರೆ.
ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಕಿರಿಯ ನಿಯೋಜಿತ ಅಧಿಕಾರಿ ನವಾಬ್ ಸುಬೇದಾರ್ ರಜ್ವೀಂದರ್ ಸಿಂಗ್ ಅವರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯ ಸಾರ್ಜಜನಿಕ ಸಂಪರ್ಕಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.
ಗಡಿ ಪ್ರದೇಶದಲ್ಲಿ ಸಂಶಯಾಸ್ಪದ ಚಲನವಲನಗಳು ಕಂಡು ಬರುತ್ತಿದ್ದಂತೆ ಗುಂಡಿನ ದಾಳಿ ಆರಂಭವಾಗಿದ್ದು ಭಾರತೀಯ ಸೇನೆಯೂ ಕೂಡಾ ಪ್ರತಿದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.