ಬೆಂಗಳೂರು, ಆ. 30(DaijiworldNews/HR): ಕೋವಿಡ್-19 ಕಾರಣದಿಂದ ಕಳೆದ ಐದು ತಿಂಗಳಿನಿಂದ ಮುಚ್ಚಿದ್ದ ಬಾರ್, ಪಬ್ ಮತ್ತು ರೆಸ್ಟೋರೆಂಟ್ಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ ತಿಳಿದು ಬಂದಿದೆ.
ಬಾರ್, ಪಬ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಮದ್ಯ ಸರಬರಾಜು ಮಾಡಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಬಕಾರಿ ಇಲಾಖೆಗೆ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತ ಆದೇಶವನ್ನು ಆಗಸ್ಟ್ 31ರಂದು ಪ್ರಕಟಿಸಲಾಗುವುದು ಎಂದು ವರದಿಗಳು ತಿಳಿಸಿವೆ.
ಬಾರ್ ಮತ್ತು ರೆಸ್ಟೋರೆಂಟ್ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಗ್ರಾಹಕರಿಗೆ ಮದ್ಯ ಸರಬರಾಜು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.
ಹೊಸ ಸುರಕ್ಷತಾ ಮಾನದಂಡಗಳ ಪ್ರಕಾರ, ನಿರ್ದಿಷ್ಟ ಸಂಖ್ಯೆಯ ವ್ಯಕ್ತಿಗಳು ಮಾತ್ರ ಮೇಜಿನ ಬಳಿ ಕುಳಿತುಕೊಳ್ಳಬಹುದು. ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರಿಗೆ ಆಹಾರ ಮತ್ತು ಮದ್ಯ ಸರಬರಾಜು ಮಾಡುವ ನಿರ್ದೇಶನಗಳನ್ನು ನೀಡಲಾಗುತ್ತದೆ. ಬಾರ್, ಪಬ್ ಮತ್ತು ರೆಸ್ಟೋರೆಂಟ್ಗಳಿಗೆ ಪ್ರವೇಶಿಸುವ ಮೊದಲು ಕೈಗಳನ್ನು ಸ್ವಚ್ಚಗೋಳಿಸಬೇಕು. ಗ್ರಾಹಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು.
ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕುಳಿತುಕೊಳ್ಳಲು ಕೇವಲ 50% ಗ್ರಾಹಕರಿಗೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ. ಬಾರ್ ಒಳಗೆ ಮದ್ಯ ಸೇವಿಸಬಹುದು. ಈ ನಿಯಮಗಳೊಂದಿಗೆ, ಅಬಕಾರಿ ಇಲಾಖೆ ಸೋಮವಾರ ಆದೇಶವನ್ನು ಕೈಗೊಳ್ಳಲಿದೆ.
ಒಟ್ಟಾರೆಯಾಗಿ, ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ತೆರೆಯುವಿಕೆಗಾಗಿ ಕುತೂಹಲದಿಂದ ಕಾಯುತ್ತಿದ್ದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿ ನೀಡಿದೆ.