ಬೆಂಗಳೂರು, ಆ. 30 (DaijiworldNews/MB) : ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಶೀಘ್ರ ಗುಣಮುಖರಾಗುವಂತೆ ಗಣ್ಯರು ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು, ''ಪಕ್ಷದ ರಾಜ್ಯಾಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕಟೀಲ್ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ'' ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ''ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಲಿ, ಪಕ್ಷವನ್ನು ಮುನ್ನಡೆಸಲಿ ಎಂದು ಹಾರೈಸುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ''ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವುದು ಬೇಸರ ತಂದಿದ್ದು, ಅವರು ಶೀಘ್ರ ಗುಣಮುಖರಾಗಿ ಪಕ್ಷ ಸಂಘಟನೆಯಲ್ಲಿ ಮತ್ತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ'' ಎಂದು ಹೇಳಿದ್ದಾರೆ.