ಬೆಂಗಳೂರು, ಆ. 30 (DaijiworldNews/SM): ಈ ವರ್ಷದ ದೀಪಾವಳಿ ಹಬ್ಬದೊಳಗೆ ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ದೇಶಕ್ಕೆ ಸೋಂಕು ವಕ್ಕರಿಸುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ರೀತಿಯ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಪುಣೆಯಲ್ಲಿ ಮಾತ್ರವೇ ಒಂದು ಪ್ರಯೋಗಾಲಯವಿತ್ತು. ಆದರೆ, ಇದೀಗ ಪ್ರಯೋಗಾಲಯಗಳ ಸಂಖ್ಯೆ ಏರಿಕೆಯಾಗಿದ್ದು, 1582ಕ್ಕೆ ಹೆಚ್ಚಾಗಿದೆ. ಇವುಗಳಲ್ಲಿ ಸರಕಾರಿ ಪ್ರಯೋಗಗಲೇ ಅಧಿಕವಾಗಿವೆ. ಇದೀಗ ಪ್ರತಿದಿನ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಸದ್ಯ ಪರಿಸ್ಥಿತಿ ಬದಲಾಗಿದೆ. ಸೋಂಕು ಶೀಘ್ರವೇ ನಿಯಂತ್ರಣಕ್ಕೆ ಬರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.