ಅಗರ್ತಾಲಾ, ಆ 31(DaijiworldNews/HR): ತ್ರಿಪುರಾದ ಗ್ರಾಮವೊಂದರಲ್ಲಿ ಕಣ್ಣಾ ಮುಚ್ಚಾಲೆ ಆಟ ಆಡುವ ನೆಪದಲ್ಲಿ 8 ವರ್ಷದ ಬಾಲಕಿ ಮೇಲೆ 7 ಬಾಲಕರು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಬಾಲಕ ಪರಾರಿಯಾಗಿದ್ದಾನೆ. ಇನ್ನು ಆರೋಪಿಗಳನ್ನು ಪಶ್ಚಿಮ ತ್ರಿಪುರಾ ಜಿಲ್ಲೆಯ ಟಾಬಾರಿಯಾ ಗ್ರಾಮದವರೆಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳಲ್ಲಿ ನಾಲ್ವರನ್ನು ಬಾಲಗೃಹಕ್ಕೆ ಕಳುಹಿಸಲಾಗಿದ್ದು, ಇಬ್ಬರು 12 ವರ್ಷ ಪ್ರಾಯದವರಾಗಿದ್ದು, ಕೋವಿಡ್ 19 ಪಾಸಿಟಿವ್ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿ ಬಾಲಕರು ಕಣ್ಣಾಮುಚ್ಚಾಲೆ ಆಟ ಆಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ. 3ನೇ ತರಗತಿ ವಿದ್ಯಾರ್ಥಿನಿಯು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೋಷಕರಿಗೆ ವಿಷಯ ತಿಳಿಸಿರುವುದಾಗಿ ನ್ಯೂ ಕ್ಯಾಪಿಟಲ್ ಕಾಂಪ್ಲೆಕ್ಸ್ ಪೊಲೀಸ್ ಠಾಣಾಧಿಕಾರಿ ಪ್ರಿಯಾ ಮಾಧುರಿ ಮಜುಂದಾರ್ ತಿಳಿಸಿದ್ದಾರೆ.